ಕರ್ನಾಟಕ ಹೈಕೋರ್ಟ್ನಲ್ಲಿ 207 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ, ಡೇಟಾ ಎಂಟ್ರಿ ಆಪರೇಟರ್ ಹಾಗೂ ಗ್ರೂಪ್-D ಹುದ್ದೆಗಳ ಅರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯ ಹೈಕೋರ್ಟ್ನಲ್ಲಿ ಖಾಲಿ ಇರುವ 11 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಕಳೆದ ಮಾರ್ಚ್ನಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದೀಗ ಈ ಹುದ್ದೆಗಳ ಸಂಖ್ಯೆಯನ್ನು 73ಕ್ಕೆ ಏರಿಸಿ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆಸಕ್ತರು ಜುಲೈ 30ರೊಳಗೆ ಸಲ್ಲಿಸಬಹುದಾಗಿದೆ. ಈಗಾಗಲೇ ಮಾರ್ಚ್ ಅಧಿಸೂಚನೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
ಅರ್ಹತೆಗಳೇನು?:
ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿವಿಯಿಂದ ವಿಜ್ಞಾನ/ಕಲೆ/ ವಾಣಿಜ್ಯ / ವ್ಯವಹಾರ ಆಡಳಿತ ಅಥವಾ ಯಾವುದೇ ಮಾನ್ಯತೆ ಹೊಂದಿರುವ ವಿವಿಯಿಂದ ಪದವಿ ಪಡೆದಿರಬೇಕು. ಇದರೊಂದಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಇತರೆ ಮಾನ್ಯತೆ ಹೊಂದಿರುವ ಮಂಡಳಿಯು ನಡೆಸುವ ಆಂಗ್ಲ ಶೀಘ್ರಲಿಪಿ ಪ್ರೌಢದರ್ಜೆ ಅಥವಾ ಆಂಗ್ಲ ಶೀಘ್ರಲಿಪಿ ಪ್ರೊಫಿಶಿಯನ್ಸಿ ಮತ್ತು ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತಾಂತ್ರಿಕ ಶಿಕ್ಷಣ ಇಲಾಖೆ ನಡೆಸುವ ಆಂಗ್ಲಕಮರ್ಷಿಯಲ್ ಪ್ರಾಕ್ಟಿಸ್/ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಬೇಸಿಕ್ ಕೋರ್ಸ್ ಪ್ರಮಾಣಪತ್ರವೂ ಕಡ್ಡಾಯ. 18ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಇತರೆ ಹಿಂದುಳಿದ ವರ್ಗ(2ಎ, 2ಬಿ, 3ಎ ಹಾಗೂ 3ಬಿ) ಅಭ್ಯರ್ಥಿಗಳಾಗಿದ್ದರೆ ಗರಿಷ್ಠ ವಯೋಮಿತಿ 43 ವರ್ಷ ಹಾಗೂ ಎಸ್ಸಿ/ಎಸ್ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗ(2ಎ, 2ಬಿ, 3ಎ ಹಾಗೂ 3ಬಿ) ಅಭ್ಯರ್ಥಿಗಳಾಗಿದ್ದರೆ 500 ರೂ. ಹಾಗೂ ಎಸ್ಸಿ/ಎಸ್ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಹೈಕೋರ್ಟ್ ವೆಬ್ ಸೈಟ್ ಗೆ (https://judiciary.karnataka.gov.in) ನೀಡಬಹುದು.
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಶೀಘ್ರಲಿಪಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು
ಕರ್ನಾಟಕ ಹೈಕೋರ್ಟ್ ಖಾಲಿ ಇರುವ 28 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತರು ಜು.28ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ, ಕಲೆ, ವಾಣಿಜ್ಯ, ವ್ಯವಹಾರ ನಿರ್ವಹಣೆ ಅಥವಾ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳಲ್ಲಿ ಕನಿಷ್ಠ ಶೇಕಡಾ 55ರಷ್ಟು ಅಂಕಗಳೊಂದಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡಾ 50ರಷ್ಟು ಪದವಿ ಅಂಕಗಳು) ಪದವಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಅಂಗ್ಲ ಮತ್ತು ಕನ್ನಡ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕಂಪ್ಯೂಟರ್ ನಿರ್ವಹಣೆಯ ಮೂಲಭೂತ ಜ್ಞಾನದ ಪ್ರಮಾಣಪತ್ರವನ್ನು ಹೊಂದಿರಬೇಕಿರುವುದು ಕಡ್ಡಾಯವಾಗಿದೆ. 18ರಿಂದ 40 ವರ್ಷದೊಳಗಿನವರಿಗೆ ಅವಕಾಶ ನೀಡಲಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 350ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಯಾಗಿದ್ದು, ಇದನ್ನು ಎಸ್ಬಿಐ ಆನ್ ಲೈನ್ ಪಾವತಿ ಗೇಟ್ ವೇ ಮೂಲಕ ಪಾವತಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,500 ರಿಂದ 81,100 ರೂ. ರವರೆಗಿನ ವೇತನ ಶ್ರೇಣಿಯೊಂದಿಗೆ ನಿಯಮಾನುಸಾರ ಸಿಗುವ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಹೈಕೋರ್ಟ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.
ವಯೋಮಿತಿ
18 ರಿಂದ 40 ವರ್ಷ.
ಗ್ರೂಪ್ ಡಿ ಹುದ್ದೆಗಳು
ಕರ್ನಾಟಕ ಹೈಕೋರ್ಟ್ ಗ್ರೂಪ್ ಡಿ ವೃಂದದ 106 ಹುದ್ದೆಗಳ ನೇಮಕಾತಿಗೂ ಅಧಿಸೂಚನೆ ಪ್ರಕಟಿಸಿದ್ದು, ಇವುಗಳಿಗೆ ಅರ್ಜಿ ಸಲ್ಲಿಸಲು ಜು.31ರ ಗಡುವು ನೀಡಲಾಗಿದೆ. ಪ್ಯೂನ್, ವಾಚ್ ಮೆನ್ , ಹೌಸ್ ಕೀಪಿಂಗ್ , ಸ್ವೀಪರ್ ಸೇರಿದಂತೆ ಹಲವಾರು ಹುದ್ದೆಗಳಿವೆ. ಇವುಗಳಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. 40 ವರ್ಷದೊಳಗಿನವರಿಗೆ ಅವಕಾಶ. ಮೀಸಲಾತಿ ವ್ಯಾಪ್ತಿಗೆ ಒಳಪಡುವವರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಆಯಾ ಹುದ್ದೆಗಳಿಗನುಸಾರ 19,900-63,100 ರೂ. ತನಕ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಸ್ಸಿ/ಎಸ್ಟಿ/ ಮಾಜಿ ಸೈನಿಕ ಅಥವಾ ವಿಶೇಷ ಚೇತನ ಅಭ್ಯರ್ಥಿಗಳು 100 ರೂ. ಉಳಿದೆಲ್ಲಾ ವರ್ಗದವರು 200 ರೂ. ಶುಲ್ಕ ಪಾವತಿಸಲು ಸೂಚಿಸಲಾಗಿದೆ. ಬೆಂಗಳೂರಿನ ಪ್ರಧಾನ ಪೀಠ ಅಥವಾ ಧಾರವಾಡ ಮತ್ತು ಕಲಬುರಗಿಯ ಹೈಕೋರ್ಟ್ ಪೀಠಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಸ್ಥಳ
ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರು ಪ್ರಧಾನ ಪೀಠ ಅಥವಾ ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ನಿಯೋಜಿಸಬಹುದು.
ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು
- ಆರಂಭದಲ್ಲಿ ಎರಡು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
- ಅಗತ್ಯವಿದ್ದರೆ ಸೇವಾವಧಿಯನ್ನು ವಿಸ್ತರಿಸಬಹುದು.
- ಕೇವಲ ಆನ್ಲೈನ್ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ.
- ನೇಮಕಾತಿ ಪ್ರಕ್ರಿಯೆಗೆ ಅಭ್ಯರ್ಥಿಗಳು ತಮ್ಮ ಸ್ವಂತ ವೆಚ್ಚದಲ್ಲೇ ಹಾಜರಾಗಬೇಕು.
- ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದು ಸೂಕ್ತ.
ಪ್ರಮುಖ ದಿನಾಂಕಗಳು
ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ: ಜುಲೈ 30 ಕೊನೆಯ ದಿನಾಂಕ
ಡೇಟಾ ಎಂಟ್ರಿ ಆಪರೇಟರ್: ಜುಲೈ 28 ಕೊನೆಯ ದಿನಾಂಕ
ಗ್ರೂಪ್-ಡಿ ಹುದ್ದೆಗಳು: ಜುಲೈ 31 ಕೊನೆಯ ದಿನಾಂಕ
ಈ ನೇಮಕಾತಿಯ ವಿಶೇಷತೆ ಏನು?
ಈ ಅಧಿಸೂಚನೆಯ ಪ್ರಮುಖ ಆಕರ್ಷಣೆ ಎಂದರೆ ಒಂದೇ ವೇಳೆ ಪದವೀಧರರು ಮತ್ತು ಎಸ್ಎಸ್ಎಲ್ಸಿ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ನೀಡಲಾಗಿದೆ. ವಿವಿಧ ಅರ್ಹತೆಗಳಿಗೆ ಪ್ರತ್ಯೇಕ ಹುದ್ದೆಗಳಿರುವುದರಿಂದ ಹೆಚ್ಚಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಅಸಿಸ್ಟೆಂಟ್ ಹುದ್ದೆಗಳ ಸಂಖ್ಯೆಯನ್ನು 11ರಿಂದ 73ಕ್ಕೆ ಹೆಚ್ಚಿಸಿರುವುದು ಉದ್ಯೋಗಾಕಾಂಕ್ಷಿಗಳಿಗೆ ಮತ್ತಷ್ಟು ಅವಕಾಶವನ್ನು ಒದಗಿಸಿದೆ.
ಅರ್ಜಿ ಸಲ್ಲಿಸುವ ಮೊದಲು ಈ ಸಲಹೆಗಳನ್ನು ಪಾಲಿಸಿ
- ನಿಮ್ಮ ಎಲ್ಲಾ ವಿದ್ಯಾರ್ಹತಾ ದಾಖಲೆಗಳನ್ನು ಸಿದ್ಧವಾಗಿಡಿ.
- ಫೋಟೋ ಹಾಗೂ ಸಹಿಯ ಸ್ಕ್ಯಾನ್ ಪ್ರತಿಯನ್ನು ಮುಂಚಿತವಾಗಿ ತಯಾರಿಸಿ.
- ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರಿಂಟ್ ಅಥವಾ PDF ಪ್ರತಿಯನ್ನು ಉಳಿಸಿಕೊಳ್ಳಿ.
- ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಿ.
- ಅಧಿಕೃತ ವೆಬ್ಸೈಟ್ನಲ್ಲಿರುವ ಸೂಚನೆಗಳನ್ನು ಸಂಪೂರ್ಣವಾಗಿ ಓದಿ.
ಕರ್ನಾಟಕ ಹೈಕೋರ್ಟ್ ಪ್ರಕಟಿಸಿರುವ ಈ ನೇಮಕಾತಿ ಅಧಿಸೂಚನೆ ಸರ್ಕಾರಿ ಉದ್ಯೋಗದ ಕನಸು ಹೊಂದಿರುವ ಸಾವಿರಾರು ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ನಿಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡುವುದರಿಂದ ಅನಗತ್ಯ ಸಮಸ್ಯೆಗಳನ್ನು ತಪ್ಪಿಸಬಹುದು.
ಗಮನಿಸಿ :
>> ಆರಂಭದಲ್ಲಿ 2 ವರ್ಷ ಅವಧಿಗೆ ನೇಮಕ ಮಾಡಿಕೊಂಡು, ಅಗತ್ಯವಿದ್ದಲ್ಲಿ ಸೇವಾವಧಿ ವಿಸ್ತರಿಸಲಾಗುವುದು.
>> ಶೀಘ್ರಲಿಪಿ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
>> ಆನ್ಲೈನ್ನಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
>> ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲೇ ನೇಮಕ ಪ್ರಕ್ರಿಯೆಗಳಿಗೆ ಹಾಜರಾಗಬೇಕು.
ಅರ್ಜಿ ಸಲ್ಲಿಸಲು ಜುಲೈ 28 ರ ಗಡುವು.
ಹೆಚ್ಚಿನ ವಿವರಗಳಿಗೆ ಹೈಕೋರ್ಟ್ ವೆಬ್ ಸೈಟ್ ಗೆ ಭೇಟಿ ನೀಡಬಹುದು
https://judiciary.karnataka.gov.in
ಇನ್ನೂ ಓದಿ :
ಉದ್ಯೋಗ ಮೇಳದ ಸಂಪೂರ್ಣ ಗೈಡ್: ಫ್ರೆಶರ್ಸ್ ಮತ್ತು ಅನುಭವಿಗಳಿಗಾಗಿ ಉಪಯುಕ್ತ ಮಾಹಿತಿ